ಎಂ.ಸಿ.ಸಿ. ಬ್ಯಾಂಕಿನ ವಾರ್ಷಿಕ ಮಹಾಸಭೆಯು ದಿನಾಂಕ 22.09.2024 ರಂದು ಪೂರ್ವಾಹ್ನ 11 ಗಂಟೆಗೆ ಮಂಗಳೂರಿನ ಸಂತ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ(ಲೊಯೊಲಾ ಹಾಲ್) ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ, ಉಪಾಧ್ಯಕ್ಷ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ ಮತ್ತು ನಿರ್ದೇಶಕ ಶ್ರೀ ಡೇವಿಡ್ ಡಿಸೋಜ ಇವರು ಜ್ಯೋತಿ ಬೆಳಗಿಸುವ ಮೂಲಕ ಸಭೆಯನ್ನು ಆರಂಭಿಸಲಾಯಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ, ಉಪಾಧ್ಯಕ್ಷ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ, ಸದಸ್ಯರಾದ ಶ್ರೀ ಎಡ್ಮಂಡ್ ಫ್ರಾಂಕ್ (ಮಾಜಿ ಉಪಾಧ್ಯಕ್ಷರು ಎಂ.ಸಿ.ಸಿ. ಬ್ಯಾಂಕ್), ಬ್ಯಾಂಕಿನ ಸದಸ್ಯರಾದ ಶ್ರೀ ರೋನ್ಸ್ ಬಂಟ್ವಾಳ್, ಶ್ರೀ ರೋಹನ್ ಮೊಂತೇರೊ,(ಮ್ಯಾನೇಜಿಂಗ್ ಡೈರೆಕ್ಟರ್, ರೋಹನ್ ಕಾರ್ಪೊರೇಶನ್) ಶ್ರೀ ಪಿಯುಸ್ ಎಲ್. ರೊಡ್ರಿಗಸ್(ಮಾಜಿ ನಿರ್ದೇಶಕರು ಪರಿಸರ ಮಾಲಿನ್ಯ ಮತ್ತು ನಿಯಂತ್ರಣ ಮಂಡಳಿ) ಮತ್ತು ಲುವಿ ಪಿಂಟೊ (ಅಧ್ಯಕ್ಶರು, ಮಾಂಡ್ ಸೊಭಾಣ್) ಇವರು ಎಲ್ಲಾ ಸದಸ್ಯರ ಪರವಾಗಿ ಬ್ಯಾಂಕಿನ ಸಂಸ್ಥಾಪಕರಿಗೆ ಪುಷ್ಪಾಂಜಲಿ ಅರ್ಪಿಸುವ ಮೂಲಕ ಗೌರವಿಸಿದರು.
ಎಂ.ಸಿ.ಸಿ. ಬ್ಯಾಂಕ್ ಎಂದು ಪ್ರಖ್ಯಾತವಾಗಿರುವ ಮಂಗಳೂರು ಕಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ್ದು 2023-24 ನೇ ವಿತ್ತೀಯ ವರ್ಷದಲ್ಲಿ ಶೇಕಡಾ 10% ಲಾಭಾಂಶ ಘೋಷಿಸಿರುತ್ತದೆ. ಜೊತೆಗೆ, ಬ್ಯಾಂಕ್ ಲಾಭ ಗಳಿಕೆಯಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ಬ್ಯಾಂಕಿನ ನಿವ್ವಳ ಲಾಭವು ರೂ.10.45 ಕೋಟಿಯಾಗಿರುತ್ತದೆ. ಇದು ಬ್ಯಾಂಕಿನ ಚರಿತ್ರೆಯಲ್ಲಿಯೇ ಅತ್ಯಂತ ಹೆಚ್ಚಿನ ಲಾಭ ಎಂದು ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಹೇಳಿದರು. ಅವರು ಬ್ಯಾಂಕಿನ 106 ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಎಂ.ಸಿ.ಸಿ.ಬ್ಯಾಂಕ್ ಒಟ್ಟು ಠೇವಣಿಯಲ್ಲಿ ಶೇಕಡಾ 10.00% ಪ್ರಗತಿ ಸಾಧಿಸಿದ್ದು, ರೂ.635.70 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 25.21% ಪ್ರಗತಿ ಸಾಧಿಸಿದ್ದು ರೂ.444.88 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.752.95 ಕೋಟಿ (ಪ್ರಗತಿ ಶೇಕಡಾ 10.03) ಮತ್ತು ಶೇರು ಬಂಡವಾಳ ರೂ.31.21 ಕೋಟಿ (ಪ್ರಗತಿ ಶೇಕಡಾ 14.07) ಆಗಿದೆ ಎಂದರು. ಜೊತೆಗೆ ಬ್ಯಾಂಕಿನ ಎನ್.ಪಿ.ಎ. ಪ್ರಮಾಣವು ಕಳೆದ ಆರ್ಥಿಕ ವರ್ಷದಲ್ಲಿದ್ದ 1.37% ರಿಂದ 1.12% ಕ್ಕೆ ತಲುಪಿರುವುದು ಬ್ಯಾಂಕಿನ ಬೆಳವಣಿಗೆ ಉತ್ತಮವಾಗಿದೆ ಎಂಬುದನ್ನು ತೋರಿಸುತ್ತದೆ. ಬ್ಯಾಂಕಿನ ಅನುತ್ಪಾದಕ ಸಾಲಕ್ಕೆ ಒದಗಿಸಿದ ಅವಕಾಶದ ಅನುಪಾತವು 78.34% ಆಗಿರುತ್ತದೆ. ಬ್ಯಾಂಕಿನ ಅಖಂಖ ಪ್ರಮಾಣವು ಆರ್ಬಿಐ ನಿಗದಿಪಡಿಸಿರುವ ಕನಿಷ್ಟ ಮಿತಿ ಶೇಕಡಾ 9%ಕ್ಕಿಂತ ಹೆಚ್ಚಿದ್ದು, 23.06% ಇರುತ್ತದೆ ಎಂದರು. ಬ್ಯಾಂಕ್ 2023-24ನೇ ಆರ್ಥಿಕ ವರ್ಷದಲ್ಲಿ ಒಂದು ಸಾವಿರ ಕೋಟಿ ವ್ಯವಹಾರದ ಮೈಲುಗಲ್ಲನ್ನು ದಾಟಿರುತ್ತದೆ. ಬ್ಯಾಂಕ್ ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಶ್ರೇಣಿಯ ಬ್ಯಾಂಕಾಗಿ ಗುರುತಿಸಲ್ಪಟ್ಟಿದ್ದು ಬ್ಯಾಂಕ್ ಆರ್ಥಿಕವಾಗಿ ಸುಧ್ರಡವಾಗಿದೆ ಎಂಬುದನ್ನುತೋರಿಸುತ್ತದೆ. ಭಾರತೀಯ ರಿಸರ್ವ್ ಬ್ಯಾಂಕಿನ ಮಾನದಂಡಗಳನ್ನು ಪೂರ್ಣಗೊಳಿಸಿ ಬ್ರಹ್ಮಾವರದಲ್ಲಿ ಮಾರ್ಚ್ ತಿಂಗಳಲ್ಲಿ 17 ನೇ ಶಾಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿ ಬ್ಯಾಂಕಿನ ಪ್ರಗತಿಗೆ ಕಾರಣರಾದ ಗ್ರಾಹಕರು, ಸದಸ್ಯರು, ಸಿಬ್ಬಂದಿ ವರ್ಗ ಮತ್ತು ಹಿತೈಷಿಗಳನ್ನು ಅಭಿನಂದಿಸಿದರು.
ತಮ್ಮ ಮಾತನ್ನು ಮುಂದುವರಿಸುತ್ತಾ, ಬ್ಯಾಂಕಿನ ಕಾರ್ಯವ್ಯಾಪ್ತಿಯನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲು ಹಾಗೂ ಹೊಸ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕ್ ಅನುಮತಿಯನ್ನು ನೀಡಿದೆ. ಇದಕ್ಕಾಗಿ ಎಲ್ಲಾ ನಿರ್ದೇಶಕರಿಗೆ, ಗ್ರಾಹಕರಿಗೆ ಮತ್ತು ಸಿಬ್ಬಂದಿಗಳಿಗೆ ಅಭಿನಂದಿಸಿದರು. ಸಾಲಗಾರರು ಸಾಲವನ್ನು ಪಡೆದು ಕ್ಲಪ್ತ ಸಮಯದಲ್ಲಿ ಮರುಪಾವತಿ ಮಾಡಿರುವುದರಿಂದ ಬ್ಯಾಂಕ್ ಉತ್ತಮ ಲಾಭವನ್ನು ಗಳಿಸಿ ಬ್ಯಾಂಕಿನ ಎನ್.ಪಿ.ಎ. ಪ್ರಮಾಣ ಕಡಿಮೆಯಾಗಲು ಸಹಕಾರಿಯಾಗಿದೆ ಎಂದರು. ಬ್ಯಾಂಕಿನ ಮುಂದಿನ ಉದ್ದೇಶ ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾ ಮುಂದಿನ ವರ್ಷದಲ್ಲಿ 10 ಹೊಸ ಶಾಖೆಗಳ ಆರಂಭ, ಉಡುಪಿ, ಮೂಡಬಿದ್ರಿ, ಕಾರ್ಕಳ, ಮತ್ತು ಕುಲಶೇಖರ ಶಾಖೆಗಳ ಸ್ಥಳಾಂತರ, ಡಿಜಿಟಲ್ ಸೇವೆಯಂತಹ ಗೂಗಲ್ ಪೇ, ಫೊನ್ ಪೇ, ಯುಪಿಎ, ಇತರ ಸೌಲಬ್ಯಗಳನ್ನು ಸದ್ಯದಲ್ಲಿಯೇ ಗ್ರಾಹಕರಿಗೆ ಒದಗಿಸುವ ಯೋಜನೆಯನ್ನು ಕೈಗೊಂಡಿದ್ದು ಶಾಖೆಗಳನ್ನು ಇಡೀ ಕರ್ನಾಟಕ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಮುಂದುವರಿಸುತ್ತಾ, ಬ್ಯಾಂಕ್ ಮುಂದಿನ 10 ವರ್ಷಗಳ ಎಲ್ಲಿ ತಲುಪಬೇಕು ಎಂಬ ಬಗ್ಗೆ ಚಿಂತನೆ ಮಾಡಿ ನಿರ್ದಿಷ್ಟ ಗುರಿಯನ್ನು ತಲುಪಲು ಈಗಾಗಲೇ ಕಾರ್ಯಯೋಜನೆಯನ್ನು ರೂಪಿಸಿದ್ದೇವೆ. ತಂತ್ರಜ್ಞಾನವನ್ನು ಉನ್ನತ ಮಟ್ಟಕ್ಕೆ ಏರಿಸಲು ಕಾರ್ಯಪ್ರವೃತ್ತರಾಗಿದ್ದೇವೆ. ಬ್ಯಾಂಕಿನ ಸದಸ್ಯರು ಉತ್ತಮ ಸಲಹೆ ಸೂಚನೆಗಳನ್ನು ನೀಡಿ ಈ ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಹಕರಿಸಿ ಬ್ಯಾಂಕಿನ ಅಭಿವೃದ್ದಿಗೆ ಕಾರಣಕರ್ತರಾಗಬೇಕೆಂದು ಕೋರಿದರು.
ಉಪಾಧ್ಯಕ್ಷ ಶ್ರೀ ಜೆರಾಲ್ಡ್ ಜೂಡ್ ಡಿಸಿಲ್ವಾ 105 ನೇ ವಾರ್ಷಿಕ ಸಾಮಾನ್ಯ ಸಭೆಯ ವರದಿಗಳನ್ನು ಓದಿದರು. 2023 – 24 ರ ಲೆಕ್ಕ ಪರಿಶೋಧಿತ ಹಣಕಾಸು, ಲೆಕ್ಕ ಪರಿಶೋಧನಾ ವರದಿ, 2024-25 ರ ಆರ್ಥಿಕ ವರ್ಷದ ಚಟುವಟಿಕೆಗಳ ಕಾರ್ಯಕ್ರಮ ಮತ್ತು 2024-25 ರ ಬಜೆಟ್ ಅನ್ನು ಸಾಮಾನ್ಯ ಸಭೆಯ ಮುಂದೆ ಮಂಡಿಸಿ, ಅನುಮೋದನೆ ಪಡೆಯಲಾಯಿತು.
ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅಧ್ಯಕ್ಷರು, ಸದಸ್ಯರು ನೀಡಿದ ಸಲಹೆ ಸೂಚನೆಗಳನ್ನು ಪರಿಗಣನೆಗೆ ತೆಗೆದುಕೊಂಡು ಮುಂದಿನ ವರ್ಷದಲ್ಲಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ನಿರ್ದೇಶಕರಾದ ಶ್ರೀ ಅಂಡ್ರ್ಯೂ ಡಿಸೋಜ, ಜೋಸೆಫ್ ಎಮ್. ಅನಿಲ್ ಪತ್ರಾವೊ, ಡಾ| ಜೆರಾಲ್ಡ್ ಪಿಂಟೊ, ಡೇವಿಡ್ ಡಿಸೋಜ, ಎಲ್ರೊಯ್ ಕಿರಣ್ ಕ್ರಾಸ್ಟೊ, ರೋಶನ್ ಡಿ’ಸೋಜ, ಹೆರಾಲ್ಡ್ ಮೊಂತೇರೊ, ಜೆ. ಪಿ. ರೊಡ್ರಿಗಸ್, ವಿನ್ಸೆಂಟ್ ಲಸ್ರಾದೊ, ಮೆಲ್ವಿನ್ ವಾಸ್, ಶ್ರೀಮತಿ ಐರಿನ್ ರೆಬೆಲ್ಲೊ, ಡಾ| ಫ್ರೀಡಾ ಡಿಸೋಜ, ವೃತ್ತಿಪರ ನಿರ್ದೇಶಕರಾದ ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಎಫ್. ಮಿನೇಜಸ್ ಉಪಸ್ಥಿತರಿದ್ದರು.
ಮಹಾಪ್ರಬಂಧಕ ಸುನಿಲ್ ಮಿನೇಜಸ್ ಸ್ವಾಗತಿಸಿ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕ ಒವಿನ್ ರೆಬೆಲ್ಲೊನಿರೂಪಿಸಿದರು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಂದಿಸಿದರು.